ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ 2 ಸ್ತ್ರೀರೋಗ ತಜ್ಞರು, 02 ಮಕ್ಕಳ ತಜ್ಞರು ಹಾಗೂ 03 ಅರವಳಿಕೆ ತಜ್ಞರ ಒಟ್ಟು 07 ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅರ್ಹ ತಜ್ಞ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಫೆ. 10 ರಂದು ಬೆಳಗ್ಗೆ 11.00 ರಿಂದ ಮ.1.00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆಯ/ತರಬೇತಿಯ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.
BIG NEWS: ಅಸ್ಸಾಂನಲ್ಲಿ 3 ದಿನಗಳಲ್ಲಿ 2,441 ಬಂಧನ: ಬಾಲ್ಯವಿವಾಹಕ್ಕೆ ಕಡಿವಾಣ ಹಾಕಿದ ಪೊಲೀಸರು
ಸಂಚಾರ ನಿಯಮ ಉಲ್ಲಂಘನೆ: ಮೂರೇ ದಿನದಲ್ಲಿ ಸಂಗ್ರಹವಾದ ದಂಡ ಎಷ್ಟು ಗೊತ್ತಾ? | Traffic violations
ಮಂಗಳೂರಿನಲ್ಲಿ ನಿರೀಕ್ಷಿಸಿದಂತೆ ಪರೀಕ್ಷೆಯಲ್ಲಿ ಅಂಕ ಬರಲಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು