ಶಿವಮೊಗ್ಗ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಜ/ದೈಹಿಕ ಶಿಕ್ಷಕರನ್ನು ಮಾಸಿಕ ರೂ. 10,000/- ದಂತೆ ಗೌರವಧನ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.15ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.
ರಾಜ್ಯದಲ್ಲಿ ‘ST ಮೀಸಲಾತಿ’ಯಲ್ಲೂ ವರ್ಗೀಕರಣ ಬೇಕು: ಸರ್ಕಾರಕ್ಕೆ ‘ಆದಿವಾಸಿ ನಾಯಕ’ರು ಆಗ್ರಹ
BREAKING: 2,000 ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್, ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ