ಶಿವಮೊಗ್ಗ : ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯಗಳಲ್ಲಿನ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ಕ್ರಾಫ್ಟ್ ಮತ್ತು ಸಮಾಜ ವಿಜ್ಞಾನ, ಆಂಗ್ಲ, ಗಣಿತ ಮತ್ತು ವಿಜ್ಞಾನ ಪಾಠ ಮಾಡುವ ಅರೆಕಾಲಿಕ ಶಿಕ್ಷಕರು/ಬೋಧಕರ ಸೇವೆಯನ್ನು ಪ್ರತಿ ಮಾಹೆಯಾನ ರೂ. 10000/-ರಂತೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಪಡೆಯಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100 ಅಡಿರಸ್ತೆ, ಆಲ್ಕೋಳ ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.12 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.
BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ