ಶಿವಮೊಗ್ಗ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ದಾವಣೆಗೆರೆ ನಗರದ ಪಿ.ಬಿ.ರಸ್ತೆ, ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮಾ.11 ಮತ್ತು 12 ರಂದು ರೈತರಿಗೆ ಕುರಿ/ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು ಎಂದು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ.ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಇವರ ದೂರವಾಣಿ ಸಂಖ್ಯೆ: 08192-233787 ಗೆ ಸಂಪರ್ಕಿಸುವುದು.
NWKRTC ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಕಿಮ್ಸ್ ಸಹಯೋಗದೊಂದಿಗೆ ಇನ್ಮುಂದೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ