ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ವಿವಿಧ ಯೋಜನೆ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ತಾಲೂಕು ಮೀನುಗಾರಿಕೆ ಇಲಾಖೆಯು 2025-26 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿಯಲ್ಲಿ ಮೀನು ಮಾರಾಟ ಮಾಡಲು ದ್ವಿಚಕ್ರ ವಾಹನ ಮತ್ತು ಶಾಖ ನಿರೋಧಕ ಪೆಟ್ಟಿಗೆ ಖರೀದಿ ಮಾಡಲು ಶಿವಮೊಗ್ಗ ತಾಲ್ಲೂಕಿನ ವಿರುಪಿನಕೊಪ್ಪ ಮತ್ತು ಸದಾಶಿಪುರ ಗ್ರಾಮಗಳಿಗೆ ಸೇರಿದ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿ.06 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.