ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಸ್ವಾವಲಂಭಿ ಬದುಕು ಸಾಗಿಸಲು ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ