ಧಾರವಾಡ : ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿಕಲಚೇತನರು ಜನವರಿ 17, 2025 ರೊಳಗಾಗಿ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಧಾರವಾಡ ತಾಲೂಕಾ ಪಂಚಾಯತಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂಆರ್‍ಡಬ್ಲ್ಯೂ)ರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಅಥವಾ ಧಾರವಾಡ ತಾಲೂಕಾ ಪಂಚಾಯತಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ) ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Taxpayers: ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್: 10.50 ಲಕ್ಷ ರೂ.ವರೆಗೆ ವಿನಾಯಿತಿ ಸಾಧ್ಯತೆ: ವರದಿ
BREAKING: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು