ಧಾರವಾಡ : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸಂಸ್ಥೆ, ಟ್ರಸ್ಟ್, ಕಂಪನಿ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಇತರ ಆಸ್ತಕರು ನಿಗಧಿತ ಅರ್ಜಿ ನಮೂನೆಗಳಲ್ಲಿ ಏಪ್ರೀಲ್ 30, 2025 ರೊಳಗಾಗಿ https://pue.karnataka.gov.in/ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬೇಕು.
ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದು. ಮೇ 1, 2025 ರ ನಂತರ ಸಲ್ಲಿಸಿದ ಪ್ರಸ್ತಾವನೆಗಳನ್ನು 2025-26 ನೇ ಶೈಕ್ಷಣಿಕ ಸಾಲಿಗೆ ಮಂಜೂರಾತಿಯನ್ನು ನೀಡಲಾಗುವುದಿಲ್ಲಾ. ಇಂತಹ ಪ್ರಸ್ತಾವನೆಗಳನ್ನು ಪರಿಶೀಲಿಸಿ ನಿಯಾಮಾನುಸಾರ ಇದ್ದಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪರಿಗಣಿಸಲಾಗುವುದು. https://dpue-pragathi.karnataka.gov.in/newcollege2025 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಎದುರು, ಕಾಲೇಜು ರಸ್ತೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಬಳ್ಳಾರಿ: ಜ.3ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಬಿ.ವೈ ವಿಜಯೇಂದ್ರ: ಹೊಸ ವರ್ಷದ ಶುಭಾಶಯ