ಹಾವೇರಿ: ಅಂತರಾಷ್ಟ್ರೀಯ, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಹಾವೇರಿ ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಸನ್ಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
BIG NEWS: ‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ’ಗೆ ಮತ್ತೆ ಸಂಕಷ್ಟ: ನಾಳೆ ಖುದ್ದು ಹಾಜರಾಗಿ, ವಿವರಣೆ ನೀಡಲು ನೋಟಿಸ್
2021-22ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ , ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ನಡೆಸಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕವಿಜೇತ ಕ್ರೀಡಾಪಟುಗಳು, ಭಾರತೀಯ ಓಲಂಪಿಕ್ ಸಂಸ್ಥೆ ಹಾಗೂ ರಾಜ್ಯ ಅಮೆಚೂರ್ ಅಥ್ಲೆಟಿಕ್ಸ್ ಸಂಸ್ಥೆ ವತಿಯಿಂದ ನಡೆಸಲಾದ ಅಂತರಾಷ್ಟ್ರ, ರಾಷ್ಟ್ರ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ಶಿವಮೊಗ್ಗ: ಜು.31ರಂದು ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Power Cut
ಈ ಹಿಂದೆ ಜಿಲ್ಲಾಡಳಿತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಈಗಾಗಲೇ ಸನ್ಮಾನಿತರಾದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿ ನಮೂನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದು, ಪ್ರಶಸ್ತಿ ಪತ್ರಗಳ ನಕಲುಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ದಿನಾಂಕ 01-08-2022 ರೊಳಗಾಗಿ ಸಲ್ಲಿಸಬೇಕು. ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
Breaking news: ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು, ಹಲವರ ರಕ್ಷಣೆ
ಹೆಚ್ಚಿನ ಮಾಹಿತಿಗಾಗಿ ದೂ.08375-296443 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.