ಬೆಂಗಳೂರು: 2022-23ನೇ ಸಾಲಿನಲ್ಲಿ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಶಾಲೆಗಳನ್ನು ( School of Commerce and Computer Education ) ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನಲ್ಲಿ ಅಕ್ಟೋಬರ್ 1ರಿಂದ ಅಕ್ಟೋಬರ್ 31ರವರೆಗೆ ಹೊಸದಾಗಿ ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಶಾಲೆಗಳನ್ನು ಪ್ರಾರಂಭಿಸಲು ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಬಹುದು ಎಂದಿದ್ದಾರೆ.
ಹೊಸದಾಗಿ ಬೆರಳಚ್ಚು ಮತ್ತು ಶೀಘ್ರಲಿಪಿಕಾರರ ತರಬೇತಿಗಾಗಿ ವಾಣಿಜ್ಯ ಶಿಕ್ಷಣ ಮತ್ತು ಗಣಕಯಂತ್ರ ಶಿಕ್ಷಣ ಶಾಲೆ ತೆರೆಯಲು ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿ ಎಂದು ಹೇಳಿದ್ದಾರೆ.