ರಾಮನಗರ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮತ್ಸö್ಯವಾಹಿನಿ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಪರಿಸರ ಸ್ನೇಹಿ ಕಿಯೋಸ್ಕ್ ತ್ರಿಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ವಾಹನಗಳನ್ನು ಪರವಾನಗಿ ಆಧಾರದಲ್ಲಿ ಪಡೆಯಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ. ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ವರ್ಗದವರಿಗೆ 0.50 ಲಕ್ಷ ರೂ.ಗಳ ಭದ್ರತಾ ಠೇವಣಿ ಹಾಗೂ 3,000 ರೂ.ಗಳ ಮಾಸಿಕ ಬಾಡಿಗೆ ಮೊತ್ತ ನಿಗಧಿಪಡಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಸಂಬAಧಿಸಿದ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಆ. 20ರೊಳಗೆ ಕಚೇರಿಯ ವೇಳೆಯಲ್ಲಿ ಸಂಬAಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ರಾಮನಗರ ತಾಲ್ಲೂಕು ಮೊ:9986883110 ಮೀನುಗಾರಿಕೆ ಸಹಾಯಕ ನಿರ್ದೇಶಕರು, ಚನ್ನಪಟ್ಟಣ ತಾಲ್ಲೂಕು ಮೊ:9880347733, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕನಕಪುರ ತಾಲ್ಲೂಕು ಮೊ:8618277242 ಹಾಗೂ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಗಡಿ ತಾಲ್ಲೂಕು ಮೊ:7795621180 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ