ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ನೀಡುವ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

‘ಯುಪಿಐ ವಹಿವಾಟಿ’ನಲ್ಲಿ ದಾಖಲೆ ; ಅಕ್ಟೋಬರ್’ನಲ್ಲಿ ಬರೋಬ್ಬರಿ ’12 ಲಕ್ಷ ಕೋಟಿ’ ಟ್ರಾನ್ಸಕ್ಷನ್

ವಿದೇಶಿ ವಿಶ್ವವಿದ್ಯಾಲಯಗಲ್ಲಿ ಪೋಸ್ಟ್ ಡಾಕ್ಟರಲ್, ಪಿ.ಹೆಚ್.ಡಿ, ಮಾಸ್ಟರ್ಸ್ ಡಿಗ್ರಿ ಉನ್ನತ ವ್ಯಾಸಂಗ ಮಾಡಲು ಶೇ.2 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ವಾರ್ಷಿಕ ಗರಿಷ್ಟ ರೂ.3.50 ಲಕ್ಷ ಅಥವಾ ಕೋರ್ಸ್‍ನ ಅವಧಿಗೆ ಗರಿಷ್ಟ ರೂ.10 ಲಕ್ಷಗಳವರೆಗೆ ಸಾಲವನ್ನು ಮಂಜೂರು ಮಾಡಲಾಗುವುದು. ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ್ 6 ರಿಂದ ಡಿಸೆಂಬರ್ 31 ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಸಲ್ಲಿಸಬಹುದು.

BIG BREAKING NEWS: ‘ಟಿ-20 ವಿಶ್ವಕಪ್’ನಲ್ಲಿ ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | India vs Bangladesh T20 World Cup 2022

ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಪಿಹೆಚ್.ಡಿ/ರಿಸರ್ಚ್ ವ್ಯಾಸಂಗ ಮಾಡಲು ವಿದ್ಯಾರ್ಥಿಗಳ ವಯೋಮಿತಿ 27 ವರ್ಷದೊಳಗಿರಬೇಕು ಹಾಗೂ ಮಾಸ್ಟರ್ ಡಿಗ್ರಿ ವ್ಯಾಸಂಗ ಮಾಡಲು ವಯೋಮಿತಿ 25 ವರ್ಷದೊಳಗಿರಬೇಕು.
ಅರ್ಜಿಗಳನ್ನು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧ ಪೋರ್ಟಲ್ ಮೂಲಕ ಸಲ್ಲಿಸಬೇಕು.

Job Alert: ‘ಶಿವಮೊಗ್ಗ ಡಿಸಿಸಿ ಬ್ಯಾಂಕ್’ನ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ರೈಲ್ವೆ ಪ್ರಯಾಣಿಕರೇ ಗಮನಿಸಿ: ಪ್ರಯಾಣದ ವೇಳೇ ಈ ರೀತಿ ಮಾಡಿದ್ರೆ ದಂಡ ವಿಧಿಸಲಾಗುತ್ತದೆ

Share.
Exit mobile version