ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡಿಗರೇತರನ್ನು ನೇಮಿಸಿಕೊಂಡ ವಿಚಾರಕ್ಕೆ ಸಂಬಂಧಪಟ್ಟಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಬಿಎಂಆರ್‌ಸಿಎಲ್ ಗೆ ಪತ್ರ ಬರೆದು ಕನ್ನಡ ಕಲಿಯದ ಕನ್ನಡಿಗರೇತರರನ್ನು ಕೈ ಬಿಟ್ಟು ತಾಂತ್ರಿಕ ಮತ್ತು ತಾಂತ್ರಿಕ ತರ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಿಕೊಳ್ಳಿ ಎಂದು ಪತ್ರ ಬರೆದಿದ್ದಾರೆ.
ನಮ್ಮ ಮೆಟ್ರೋದಲ್ಲಿ ಕನ್ನಡಿಗರೇತರರಿಗೆ ನೇಮಕಾತಿ ಅಧಿಸೂಚನೆ ಹಿನ್ನೆಲೆಯಲ್ಲಿ ಕನ್ನಡಿಗರೇತರರಿಗೆ ನೇಮಕಾತಿ ಕಲ್ಪಿಸುವ ಪ್ರಕ್ರಿಯೆಯನ್ನು ಕೈಬಿಡಬೇಕು. ಕನ್ನಡ ಕಲಿಯದ ಕನ್ನಡಿಗರನ್ನು ಹುದ್ದೆಯಿಂದ ಕೈಬಿಡಬೇಕು. ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಿ. BMRCL ಎಂ.ಡಿ ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರ ಬರೆದಿದ್ದಾರೆ. ಕನ್ನಡಿಗರೇತರನ್ನು ಕೈಬಿಟ್ಟು. ಕನ್ನಡಿಗರಿಗೆ ಅವಕಾಶ ಕಲ್ಪಿಸಿ ಎಂದು BMRCL ಎಂ.ಡಿ ಗೆ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ.