ಬೆಂಗಳೂರು : ಚಾಲಕ ಹುದ್ದೆ ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 2814 ಚಾಲಕರ ಹುದ್ದೆಗಳ ನೇಮಕ ಮಾಡಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಶಾಸಕ ಲಿಂಬಣ್ಣನವರ ಪ್ರಶ್ನೆಗೆ ಉತ್ತರಿಸಿದ ಅವರು 2814 ಚಾಲಕರು ಹಾಗೂ ಇದರ ಜೊತೆ ಹೆಚ್ಚುವರಿಯಾಗಿ 250 ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ , ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಿ ಚಾಲಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದರು.
ಸದ್ಯ ಸಂಸ್ಥೆಯಲ್ಲಿ 2500 ಚಾಲಕ, 55 ಚಾಲಕರು ( ಬ್ಯಾಕ್ ಲಾಗ್ ) , 250 ಚಾಲಕ ಕಂ ನಿರ್ವಾಹಕ ( ಬ್ಯಾಕ್ ಲಾಗ್ ) ಸೇರಿದಂತೆ ಒಟ್ಟು 2814 ಹುದ್ದೆಗಳ ನೇಮಕಕ್ಕೆ 2019 ರಲ್ಲೇ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ನೇಮಕಾತಿ ಪ್ರಕ್ರಿಯೆಗೆ ಪ್ರಸ್ತಾವನೆ ಸ್ವೀಕೃತಗೊಂಡಿದೆ ಎಂದು ಮಾಹಿತಿ ನೀಡಿದರು.
ಜೆಡಿಎಸ್ ವರಿಷ್ಟ ಹೆಚ್,ಡಿ ದೇವೇಗೌಡರ ನಿವಾಸಕ್ಕೆ ರಾಜಕೀಯ ಧುರೀಣರ ದೌಡು : ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದೇನು ..?