ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಚಿಸಲಾಗಿರುವ ಸಮಿತಿಗಳ ಖಾಲಿ ಹುದ್ದೆಗಳನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಖಾಲಿ ಹುದ್ದೆಗಳನ್ನು 15 ದಿನಗಳಲ್ಲಿ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿ ರಚಿಸಲಾಗಿದೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹಲವರು ಅಧಿಕಾರ ಸ್ವೀಕಾರ ಮಾಡಿಲ್ಲ ಎಂದು ಹೇಳಿದರು.








