GBA ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು. ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ … Continue reading GBA ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಡಿಸಿಎಂ ಡಿ.ಕೆ. ಶಿವಕುಮಾರ್