ಬೆಂಗಳೂರು : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ , ಶಾಂತಿ ಸಂಯಮದಿಂದ ಅಂತಿಮ ದರ್ಶನ ಪಡೆಯಿರಿ ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿದ್ದಾರೆ
ಸುದ್ದಿಗಾರರೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿ ಅಂತಿಮ ದರ್ಶನ ಪಡೆಯುವ ಸಂದರ್ಭಧಲ್ಲಿ ಶಾಂತಿ ಸಂಯಮದಿಂದ ಸರದಿ ಸಾಲಿನಲ್ಲಿ ಬರಬೇಕು. ಅಂತಿಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ . ಈಗಾಗಲೇ ವಿಜಯಪುರ ಜಿಲ್ಲೆ ಜನರು ಶ್ರೀಗಳ ದರ್ಶನಕ್ಕೆ ಬರುವವರಿಗೆ ಊಟ ವ್ಯವಸ್ಥೆ ಕಲ್ಪಿಸುವ ಮೂಲಕ ಎಲ್ಲಾ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಶ್ರೀಗಳ ಇಚ್ಚೆಯಂತೆ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ತಿಳಿಸಿದರು.
ಸ್ವಾಮೀಜಿ ಅಂತ್ಯಕ್ರಿಯೆ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ್ ರಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಸ್ವಾಮೀಜಿ ದರ್ಶನಕ್ಕಾಗಿ ಇನ್ನೂ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ನಾನಾ ಭಾಗಗಳಿಂದ ಜನರು ಆಗಮಿಸಿದ್ದು ಶ್ರೀಗಳ ದರ್ಶನ ಪಡೆದಿದ್ದಾರೆ.