ಶಿವಮೊಗ್ಗ: ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ಯಾಂಟ್ರೋ ರವಿ ಕೇಸ್ ಗಳ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತದೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಗೂಂಡಾ ಕೇಸ್ ದಾಖಲಾಗಿದೆ ಎಂದರು.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಳಿ ಸ್ಯಾಂಟ್ರೋ ರವಿ ಬಗ್ಗೆ ಸಾಕಷ್ಟು ಮಾಹಿತಿ ಇದೆ. ಅವರ ಬಳಿ ಇರುವ ದಾಖಲೆಗಳನ್ನು ಪೊಲೀಸರಿಗೆ ನೀಡಿದರೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮೈಸೂರು ಕಮೀಷನರ್ ಗೆ ಸೂಚಿಸಲಾಗಿದೆ. ಅವರು ಈ ಬಗ್ಗೆ ಕ್ರಮವಹಿಸಲಿದ್ದಾರೆ ಎಂಬುದಾಗಿ ತಿಳಿಸಿದರು.
ಮತ್ತೊಂದೆಡೆ ಸ್ಯಾಂಟ್ರೋ ರವಿಗೆ ಕುಮಾರಕೃಪಾ ಗೆಸ್ಟ್ ಹೌಸ್ ನೀಡಿದಂತ ಆರೋಪದಲ್ಲಿ ಸೀನಿಯರ್ ಮ್ಯಾನೇಜರ್ ಹೆಚ್ ಎಸ್ ದೇವರಾಜ್ ಅವರನ್ನು ವರ್ಗಾವಣೆಗೊಳಿಸಿ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಆದೇಶಿಸಿದೆ.
ಖಾದಿ ಪ್ರಿಯರೇ ಗಮನಿಸಿ: ಜ.26ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಖಾದಿ ಉತ್ಸವ