ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ.
ಈಗಾಗಲೇ ಅಭಿಮಾನಿಗಳು ಅಪ್ಪು ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ.ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಪ್ಪು ಸಮಾಧಿ ಬಳಿ ಆಗಮಿಸಿದ್ದಾರೆ. ಈ ವೇಳೆ ಅಪ್ಪು ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಅಪ್ಪು ನೋಡಲು ಅಭಿಮಾನಿಗಳು ಬೆಳಗ್ಗೆಯಿಂದಲೇ ಸಮಾಧಿ ಬಳಿ ಬರುತ್ತಿದ್ದಾರೆ.
ಅಂದಹಾಗೆ ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.