ಬೆಂಗಳೂರು : .ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ , ಮೈಸೂರು, ಮಂಗಳೂರು ಸೇರಿದಂತೆ ವಿವಿಧೆಡೆ ದಾಳಿಯಾಗಿದೆ. ಎನ್ಐಎ ದಾಳಿ ಧರ್ಮಾಧರಿತವಲ್ಲ ಅಪರಾಧ ಆಧರಿತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಖಚಿತ ಮಾಹಿತಿ ಮೇರೆಗೆ NIA ಸಿಬ್ಬಂದಿಗಳು, ಹಲವು ಕಡೆ ಶೋಧ ನಡೆಸಿದ್ದಾರೆ , ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಮಾಜದಲ್ಲಿ, ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ, ಎಲ್ಲರೂ ಸಹಕರಿಸಬೇಕು, ಎಂದು ಗೃಹಸಚಿವರು ಹೇಳಿದರು.ಇಬ್ಬರು ವ್ಯಕ್ತಿಗಳು, ಭಯೋತ್ಪಾದಕ ಸಂಘಟನೆ ಜತೆ, ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ, ತನಿಖೆ ನಡೆಸಲಾಗುತ್ತಿದ್ದು ಪೊಲೀಸರಿಗೆ ಕೆಲವು ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮತ್ತೊಮ್ಮೆ ‘ಪ್ರಧಾನಿ ಮೋದಿ’ ಶ್ಲಾಘಿಸಿದ ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ; ವಿಡಿಯೋ ವೈರಲ್.!