ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ಈಗಾಗಲೇ ಅನೇಕ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಇಂದು ಬೆಳಗ್ಗೆಯಿಂದ ರಾಜ್ಯದ ಹಲವು ಕಡೆ ಪೊಲೀಸರು ಪಿಎಫ್ಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿಬ್ಬಂದಿಗಳು ಮತ್ತು ಪೊಲೀಸರು ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಿದ ವೇಳೆ ಸಂಘಟನೆಯ ಕೆಲವು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸರು ಅವರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ, ಶಾಂತಿ ಭಂಗ ಉಂಟು ಮಾಡಬಾರದು ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ,
ಕಳೆದ ವಾರ ಪಿಎಫ್ಐ ಮುಖಂಡರ ಮೇಲೆ ಎನ್ಐಎ ದಾಳಿ ನಡೆಸಿತ್ತು. ಇಂದು ಬೆಳಗ್ಗೆ 3 ಗಂಟೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಈಗಾಗಲೇ ಸುಮಾರು 80 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ, ಕೋಮುಸೌಹಾರ್ದಕ್ಕೆ ಹಾನಿ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಈ ದಾಳಿ ನಡೆಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ವಶಕ್ಕೆ ಪಡೆದುಕೊಂಡ ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಸೆಕ್ಷನ್ 107 ರಡಿ ಅವರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗುವುದು. ವಶಕ್ಕೆ ಪಡೆದ ಮುಖಂಡರು ಮತ್ತು ಕಾರ್ಯಕರ್ತರು ಅಹಿತಕರ ಘಟನೆಯಲ್ಲಿ ಭಾಗಿಯಾಗಕೂಡದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಬಾಂಡ್ನಲ್ಲಿ ಬರೆಸಲಾಗುವುದು ಎಂದು ಹೇಳಿದರು.
BREAKING NEWS : ಬೆಂಗಳೂರು ನಗರ ಡಿಸಿ ಕಚೇರಿ ಮೇಲೆ ʻ ಲೋಕಾಯುಕ್ತ ದಾಳಿ ʼ | Karnataka Lokayukta Raid