ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ಪತ್ತೆ ಪರೀಕ್ಷೆಗೆ ದರವನ್ನು ನಿಗದಿ ಪಡಿಸಿದೆ. ಆ ದರದಂತೆ ಹಣ ಪಡೆಯುವಂತೆಯೂ ಖಡಕ್ ಆದೇಶ ಮಾಡಿದೆ. ಒಂದು ವೇಳೆ ಅದಕ್ಕಿಂತ ಹೆಚ್ಚು ಹಣ ಪಡೆದ್ರೇ ದೂರು ಸಲ್ಲಿಸುವಂತೆ ತಿಳಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ನಿಯಂತ್ರಣ ಕ್ರಮವನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ಪತ್ತೆ ಪರೀಕ್ಷೆಗೆ ದರ ನಿಗದಿ ಪಡಿಸಲಾಗಿದೆ. ಎಲಿಸಾ ಪರೀಕ್ಷೆಗೆ ರೂ.300, ರಾಪಿಡ್ ಪರೀಕ್ಷೆಗೆ ರೂ.250 ನಿಗದಿ ಪಡಿಸಲಾಗಿದೆ ಅಂತ ತಿಳಿಸಿದೆ.
ಇನ್ನೂ ಡೆಂಘಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿ ದರ ಪಡೆಯುವ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಹಳೆ ಕ್ಷಯರೋಗಿಗಳ ಆಸ್ಪತ್ರೆ ಆವರಣ, ಹಳೆ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು – 38 ಈ ವಿಳಾಸಕ್ಕೆ ದೂರು ಸಲ್ಲಿಸಬಹುದು.
ಇ-ಮೇಲ್ ವಿಳಾಸ dhobangaloreurban@gmail.com ಅಥವಾ ಮೊಬೈಲ್ ಸಂಖ್ಯೆ 9449843037 ಕ್ಕೆ ಸಂಪರ್ಕಿಸಿ ದೂರು ಸಲ್ಲಿಸಬಹುದು.
ಡೆಂಘಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿ ದರ ಪಡೆಯುವ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಹಳೆ ಕ್ಷಯರೋಗಿಗಳ ಆಸ್ಪತ್ರೆ ಆವರಣ, ಹಳೆ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು – 38… pic.twitter.com/O2y6YK6hMN
— DIPR Karnataka (@KarnatakaVarthe) July 12, 2024
‘BPL ರೇಷನ್ ಕಾರ್ಡ್’ ಹೊಂದಿರೋರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಉಚಿತವಾಗಿ ‘ಸೊಳ್ಳೆ ಪರದೆ’ ವಿತರಣೆ