ಬೆಂಗಳೂರು: ಇವರು ಪೊಲೀಸರೊ ( Karnataka Police ) ಅಥವಾ ಬೀದಿ ಪುಂಡರೋ.? #PayCM ಟಿ ಶರ್ಟ್ ಧರಿಸಿದ್ಧ ಕಾಂಗ್ರೆಸ್ ಕಾರ್ಯಕರ್ತನ ( Congress Worker ) ಶರ್ಟ್ ಬಿಚ್ಚಿಸಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಕಿಡಿಕಾರಿದ್ದಾರೆ.
ಈ ಕುರಿತಂತೆ ಸರಣಿ ಟ್ವಿಟ್ ಮಾಡಿದ್ದು, #PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಬಿಜೆಪಿ ( BJP ) ಅವರನ್ನು ಆಗ್ರಹಿಸಿದ್ದಾರೆ.
#PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ.
ಈ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು @CMofKarnataka ಅವರನ್ನು ಆಗ್ರಹಿಸುತ್ತೇನೆ.
1/6#PayCM pic.twitter.com/KBOXdGC4Fz— Siddaramaiah (@siddaramaiah) October 1, 2022
ಯಥಾ ಮುಖ್ಯಮಂತ್ರಿ, ತಥಾ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ ಎಂದಿದ್ದಾರೆ.
ಯಥಾ ಮುಖ್ಯಮಂತ್ರಿ, ತಥಾ ಪೊಲೀಸ್.
ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ @BSBommai ಹೇಳಿದ್ದರು.
ಪೊಲೀಸರು ಅದನ್ನು ಅನುಷ್ಠಾನಗೊಳಿಸಲು
ಹೊರಟಂತಿದೆ.
2/6 #PayCM— Siddaramaiah (@siddaramaiah) October 1, 2022
#40PercentCommission ಭ್ರಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್ ಬಿಜೆಪಿ ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ ಎಂದು ಕಿಡಿಕಾರಿದ್ದಾರೆ.
#40PercentCommission ಭ್ರಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್ @BJP4Karnataka ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ.
3/6#PayCM— Siddaramaiah (@siddaramaiah) October 1, 2022
ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ? ಸಿಎಂ ಅವರೇ, ನಮ್ಮ ವಿರುದ್ಧ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.
ಭ್ರಷ್ಟಾಚಾರದ ವಿರುದ್ಧದ ಅಭಿಯಾನ ಅಪರಾಧ ಎಂದು ಯಾವ ಕಾನೂನಿನಲ್ಲಿ ಹೇಳಿದೆ? @CMofKarnataka ಅವರೇ,
ನಮ್ಮ ವಿರುದ್ಧ ಕೊಳಕು ಭಾಷೆಯ ಜಾಹೀರಾತು ನೀಡಿದ್ದೀರಿ, ಅದನ್ನು ನಾವು ಹರಿದುಹಾಕಲು ಹೋಗುವುದಿಲ್ಲ. ರಾಜಕೀಯವಾಗಿಯೇ ಎದುರಿಸುತ್ತೇವೆ.
4/6#PayCM— Siddaramaiah (@siddaramaiah) October 1, 2022
ಕಳೆದ ಕೆಲವು ದಿನಗಳಿಂದ ರಾಜ್ಯದ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಶುರುಮಾಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ ಎಂದು ಒತ್ತಾಯಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಪೊಲೀಸರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಶುರುಮಾಡಿದ್ದಾರೆ.
ಇದು ವಿಕೋಪಕ್ಕೆ ಹೋಗಿ ಜನರೇ ಪೊಲೀಸರ ವಿರುದ್ಧ ತಿರುಗಿ ಬೀಳುವಂತಹ ಪರಿಸ್ಥಿತಿಯನ್ನು ದಯವಿಟ್ಟು ಸೃಷ್ಟಿ ಮಾಡಬೇಡಿ. @BJP4Karnataka
5/6#PayCM— Siddaramaiah (@siddaramaiah) October 1, 2022
ಕರ್ನಾಟಕ ಶಾಂತಿಪ್ರಿಯರ ನಾಡು, ಇದನ್ನು ಪೊಲೀಸ್ ರಾಜ್ಯ ಮಾಡಲು ಹೋಗಬೇಡಿ. ಯಾವ ಸರ್ಕಾರವೂ ಶಾಶ್ವತ ಅಲ್ಲ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾದೀತು ಎಂದು ಹೇಳಿದ್ದಾರೆ.
ಕರ್ನಾಟಕ ಶಾಂತಿಪ್ರಿಯರ ನಾಡು, ಇದನ್ನು ಪೊಲೀಸ್ ರಾಜ್ಯ ಮಾಡಲು ಹೋಗಬೇಡಿ.
ಯಾವ ಸರ್ಕಾರವೂ ಶಾಶ್ವತ ಅಲ್ಲ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ.
ಪಾಪಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾದೀತು.
6/6#PayCM— Siddaramaiah (@siddaramaiah) October 1, 2022