ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೀವು ದ್ವಿತೀಯ ಪಿಯುಸಿ ಪಾಸ್ ಆಗಿದ್ದರೇ, ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಮಾರ್ಚ್.4ರಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ತಿಳಿಸಿದೆ.
ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್.3 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್.6ರವರೆಗೆ ಶುಲ್ಕಪಾವತಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದೆ.
ಮಾರ್ಚ್.4ರಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ನೀವು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೇ ಕೆಇಎಯ ಅಧಿಕೃತ ಜಾಲತಾಣ http://kea.kar.nic.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿಯೂ ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ ಪಡೆಯಬಹುದಾಗಿದೆ.
BREAKING: ಮಾರ್ಚ್.13ರ ನಂತರ ‘ಲೋಕಸಭಾ ಚುನಾವಣೆ’ಗೆ ‘ವೇಳಾಪಟ್ಟಿ’ ಪ್ರಕಟ ಸಾಧ್ಯತೆ – ವರದಿ | Lok Sabha poll
ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ