ಬಳ್ಳಾರಿ: ಕೊನೆಗೂ ಬಳ್ಳಾರ ಜೈಲಿಗೆ ನಟ ದರ್ಶನ್ ನನ್ನು ಕರೆದುಕೊಂಡು ಹೋಗಿ ಬಿಡಲಾಗಿದೆ.
ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಯ ಕೇಂದ್ರೀಯ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಕೆಲಸಕ್ಕೆ ಚಾಲನೆ ಇಂದು ಬೆಳಗ್ಗೆ ಚಾಲನೆ ನೀಡಲಾಗಿತ್ತು. ಪೊಲೀಸರು ಬೆಂಗಳೂರು – ತುಮಕೂರು – ಚಳ್ಳಕೆರೆ – ಮೊಳಕಾಲ್ಮುರು – ರಾಂಪುರ ಮಾರ್ಗವಾಗಿಯೇ ಬಳ್ಳಾರಿಗೆ ಪ್ರಯಾಣಿಸಿದ್ದರು. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿದೆ. ಸದ್ಯ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದಲ್ಲದೇ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.