ಮೈಸೂರು : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರೋದ್ರಿಂದ ದೇಗುಲಗಳ ಹುಂಡಿ ಹಣಕ್ಕೂ ಸರ್ಕಾರ ಕೈ ಹಾಕಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ವಿಧಾನ ಪರಿಷತ್‌ಸದಸ್ಯ ಎಚ್. ವಿಶ್ವನಾಥ್ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲೇನು ರಾಜ್ಯದ ಖಜಾನೆ ಭರ್ತಿಯಾಗಿತ್ತಾ. ನಿಮ್ಮಪ್ಪನನ್ನು ಜೈಲಿಗೆ ಹಾಕಿಸಿದ್ದೇ ನೀವು ಎಂದು ವಾಗ್ದಾಳಿ ನಡೆಸಿದ್ದಾರೆ.
ತುರ್ತು ನಿರ್ವಹಣಾ ಕಾರ್ಯ : ಫೆ.27-28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ನೀರು ಪೂರೈಕೆ ಸಂಪೂರ್ಣ ಸ್ಥಗಿತ
ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಯಾಗಬೇಕು. ನಾನು ಸಹಕಾರ ಸಚಿವನಾಗಿದ್ದಾಗ ಈ ಬಗ್ಗೆ ಪ್ರಯತ್ನ ಮಾಡಿದ್ದೆ. ಈಗ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಶಾಸಕ ಜಿ.ಟಿ. ದೇವೇಗೌಡ ವಿರೋಧಿಸುತ್ತಿರುವುದು ಸರಿಯಲ್ಲ. ಅವರ ಪತ್ನಿ ಲಲಿತಾ ರಾಜ್ಯ ಮಹಿಳಾ ಸಹಕಾರ ಬ್ಯಾಂಕ್ ಅಧ್ಯಕ್ಷೆ, ಮಗ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ. ಮೀಸಲಾತಿ ಜಾರಿಗೆ ವಿರೋಧಿಸುತ್ತಿರುವ ಜಿ ಟಿ ದೇವೇಗೌಡರೇ ನೀವು ಕೇವಲ ಒಂದು ಸಮುದಾಯದ ಬೆಂಬಲದಿಂದ ಗೆದ್ದಿದ್ದೀರಾ ಎಂದು ಅವರು ಪ್ರಶ್ನಿಸಿದರು.
ಉದ್ಯೋಗ ವಾರ್ತೆ: ನಾಳೆಯಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಭಾಗವಹಿಸಲು ಈ ರೀತಿ ಮಾಡಿ!
ಬೇರೆ ಸಮುದಾಯಗಳ ಋಣದಲ್ಲಿ ನೀವು ಇಲ್ಲವೇ? 67 ಸಾವಿರ ಸಹಕಾರ ಬ್ಯಾಂಕ್ ಗಳ ಪೈಕಿ 42 ಸಾವಿರ ಲಾಭದಲ್ಲಿ ನಡೆಯುತ್ತಿವೆ. ಲಾಭಾಂಶವನ್ನು ಇವರೇ ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ಜಿ ಟಿ ದೇವೇಗೌಡ ವಿರೋಧಿಸುತ್ತಿದ್ದಾರೆ.ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಈ ಮೊದಲು ಕೂಡ ನಾನು ಸಂಸದನಾಗಿದ್ದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದರು.
ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!