ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ಹಿನ್ನಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಸಂಪೂರ್ಣ ಅಧಿಕಾರ ನೀಡಿತ್ತು. ಇದೀಗ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಸೇನೆಗೆ ಸಂಪೂರ್ಣ ಅಧಿಕಾರವನ್ನು ಭೂಸೇನೆ ಮುಖ್ಯಸ್ಥ ಉಪೇಂದ್ರ ನೀಡಿದ್ದಾರೆ.
ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನತೆಯ ಕಾರಣದಿಂದಾಗಿ ಗಡಿ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇನೆ ಪುಲ್ ಅಲರ್ಟ್ ಮಾಡಲಾಗಿದೆ. ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೇನೆಗೆ ಪೂರ್ಣ ಅಧಿಕಾರ ನೀಡಲಾಗಿದೆ.
ಸೇನೆಗೆ ಸಂಪೂರ್ಣ ಅಧಿಕಾರವನ್ನು ಭೂಸೇನೆ ಮುಖ್ಯಸ್ಥ ಉಪೇಂದ್ರ ನೀಡಿದ್ದಾರೆ. ಪಾಕ್ ಸೇನೆಗೆ ಮತ್ತು ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಸೇನೆಗೆ ಅಧಿಕಾರವನ್ನು ನೀಡಲಾಗಿದೆ. ಯಾವುದೇ ಪರಿಸ್ಥಿತಿ ಬಂದರೂ ಮುಕ್ತವಾಗಿ ಎದುರಿಸಲು ಸೂಚಿಸಲಾಗಿದೆ.