ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯಲ್ಲಿ ಸೋಮವಾರ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಗಡಿ ಜಿಲ್ಲೆಯ ನೌಶೇರಾ ಸೆಕ್ಟರ್ನಲ್ಲಿ ಭಾನುವಾರ ಮತ್ತು ಸೋಮವಾರ ಮಧ್ಯರಾತ್ರಿ ಸೇನೆಯು ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು ಎಂದು ಅಧಿಕಾರಿ ತಿಳಿಸಿದ್ದಾರೆ. ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಕೊಂದು ಎಕೆ -47 ರೈಫಲ್ಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
ಇದೇ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ. ಸೆಪ್ಟೆಂಬರ್ 3 ರಂದು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಗುಂಪು ಸೇನೆಯ ಮೇಲೆ ಕೆಲವು ಗುಂಡುಗಳನ್ನು ಹಾರಿಸಿ ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ