ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತ್ರ ಭಾರತ ಸರ್ಕಾರವು 48 ಗಂಟೆಗಳಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತ ತೊರೆಯುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಭಾರತದಲ್ಲಿದ್ದಂತ ಸುಮಾರು 188 ಪಾಕ್ ನಾಗರೀಕರು ವಾಪಾಸ್ ಮರಳಿದ್ದಾಗಿ ತಿಳಿದು ಬಂದಿದೆ.
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದರು. 26 ಮಂದಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾಗಿದ್ದರು.
ಪಹಲ್ಗಾಮ್ ದಾಳಿಗೆ ಪ್ರತೀಕವಾಗಿ ಭಾರತ ಪಾಕಿಸ್ತಾನಕ್ಕೆ ದಿಟ್ಟ ಪ್ರತ್ಯುತ್ತರ ಎನ್ನುವಂತೆ ಸಿಂಧೂ ನದಿ ನೀರು ಒಪ್ಪಂದ ರದ್ದುಗೊಳಿಸಿತ್ತು. ಇದಲ್ಲದೇ 48 ಗಂಟೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತ ತೊರೆಯುವಂತೆ ಆದೇಶಿಸಿತ್ತು. ಆ ಬಳಿಕ ಪಾಕಿಸ್ತಾನಿ ಪ್ರಜೆಗಳಿಗೆ ನೀಡಿದ್ದಂತ ವೀಸಾವನ್ನು ರದ್ದುಗೊಳಿಸಿತ್ತು.
ಈ ಹಿನ್ನಲೆಯಲ್ಲಿ ಭಾರತದಲ್ಲಿದ್ದಂತ ಸುಮಾರು 188 ಪಾಕ್ ನಾಗರೀಕರು ವಾಪಾಸ್ ಆಗಿರುವುದಾಗಿ ತಿಳಿದು ಬಂದಿದೆ. ಅವರನ್ನು ಅಟ್ಟಾರಿ ಗಡಿಯಿಂದ ಭಾರತ ಸರ್ಕಾರವು ಪಾಕಿಸ್ತಾನಕ್ಕೆ ವಾಪಾಸ್ ಕಳುಹಿಸಿರುವುದಾಗಿ ಹೇಳಲಾಗುತ್ತಿದೆ.
ಕ್ರಿಮಿಯಾ ರಷ್ಯಾದೊಂದಿಗೆ ಉಳಿಯುತ್ತದೆ: ಉಕ್ರೇನ್ ವಿರುದ್ಧ ಡೊನಾಲ್ಡ್ ಟ್ರಂಪ್ ವಾಗ್ದಾಳಿ