Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಿಎಂ ಕಿಸಾನ್ ಯೋಜನೆಯಲ್ಲಿ ಬಿಗ್ ಅಪ್‌ಡೇಟ್: ಇನ್ಮುಂದೆ ‘ರೈತ ಐಡಿ’ ಕಡ್ಡಾಯ, ಇಲ್ಲದಿದ್ದರೆ ಸಿಗಲ್ಲ ₹2,000 ಹಣ!

20/04/2026 6:31 PM

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

20/04/2026 6:28 PM

ರಾಜ್ಯ ಸರ್ಕಾರಿ ನೌಕರರ ಸಂಬಳ ವಿಳಂಬದ ಹಿಂದೆ ಅಡಗಿದೆಯೇ ಗೃಹಲಕ್ಷ್ಮಿ ಯೋಜನೆಯ ಎಫೆಕ್ಟ್?

20/04/2026 6:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಸದ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿಯಾಗಿ ವಾಹನಗಳ ವ್ಯವಸ್ಥೆ : ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್
KARNATAKA

ಕಸದ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿಯಾಗಿ ವಾಹನಗಳ ವ್ಯವಸ್ಥೆ : ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್

By kannadanewsnow0911/07/2025 5:10 PM

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಹೆಚ್ಚುವರಿಯಾಗಿ ವಾಹನಗಳ ವ್ಯವಸ್ಥೆ ಮಾಡಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು.

ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮದ ಭಾಗವಾಗಿ ಮಿನಿ ವಿಧಾನಸೌಧದ ಪಾಲಿಕೆ ಸಭಾಂಗಣದಲ್ಲಿ ಇಂದು ಸಾರ್ವಜನಿಕರೊಂದಿಗೆ ಅಹವಾಲುಗಳನ್ನು ಸ್ವೀಕರಿಸುವ ವೇಳೆ ಮಾತನಾಡಿದ ಅವರು, ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸಲು 50 ಆಟೋ ಟಿಪ್ಪರ್‌ಗಳು ಹಾಗೂ 7 ಕಾಂಪ್ಯಾಕ್ಟರ್ ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದೆಂದು ತಿಳಿಸಿದರು.

ಪಶು ಚಿಕಿತ್ಸಾಲಯ ಪ್ರಾರಂಭಿಸಿ:

ಯಲಹಂಕ ವಲಯ ವ್ಯಾಪ್ತಿಯಲ್ಲಿ ಪ್ರಾಣಿಗಳ ಚಿಕಿತ್ಸೆಗಾಗಿ ದೊಡ್ಡ ಬೆಟ್ಟಹಳ್ಳಿಯಲ್ಲಿ ಪಶು ಚಿಕಿತ್ಸಾಲಯಕ್ಕಾಗಿ ಜಾಗ ಮೀಸಲಿರಿಸಿದ್ದು, ಚಿಕಿತ್ಸಾಲಯಕ್ಕಾಗಿ ಅಗತ್ಯ ಕಾಮಗಾರಿ ಕೈಗೊಂಡು, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಪಶು ಚಿಕಿತ್ಸಾಲಯವನ್ನು ಪ್ರಾರಂಭಿಸಲು ತಿಳಿಸಿದರು.

ನಿವಾಸಿ ಸಂಘಗಳ ಜೊತೆ ತಿಂಗಳಿಗೊಮ್ಮೆ ಸಭೆ ನಡೆಸಿ:

ಸ್ಥಳೀಯ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ತಿಂಗಳಿಗೊಮ್ಮೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಭೆ ನಡೆಸಿ, ಸ್ಥಳೀಯವಾಗಿ ಇರುವ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸಿಕೊಳ್ಳಿ ಎಂದು ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು. ಜೊತೆಗೆ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಮಾಡಲು ಇದೇ ವೇಳೆ ಸೂಚಿಸಿದರು.

ಕೆಳಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ:

ಯಲಹಂಕ ರೈಲ್ವೇ ಸ್ಟೇಷನ್ ಬಳಿಯ ಕೆಳಸೇತುವೆ ಕಾಮಗಾರಿಯು ಭೂಸ್ವಾಧೀನ ಪ್ರಕ್ರಿಯೆಯ ಪರಿಣಾಮ ಪೂರ್ಣಗೊಂಡಿರುವುದಿಲ್ಲ. ಈ ಸಂಬಂಧ ಅಗತ್ಯ ಜಾಗವನ್ನು ಭೂಸ್ವಾಧೀನಪಡಿಸಿಕೊಂಡು ಕಾಲಮಿತಿಯೊಳಗಾಗಿ ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

23 ನಾಗರಿಕರಿಂದ ಅಹವಾಲುಗಳ ಸ್ವೀಕಾರ:

ಯಲಹಂಕ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ 23 ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದು, ನಾಗರಿಕರಿಂದ ಬಂದಂತಹ ದೂರುಗಳಿಗೆ ಶೀಘ್ರವಾಗಿ ಸ್ಪಂದಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗರಿಕರಿಂದ ಸ್ವೀಕರಿಸಿದ ಪ್ರಮುಖ ಅಹವಾಲುಗಳು:

• ಹೆಗ್ಡೆನಗರ ಮುಖ್ಯ ರಸ್ತೆಯಲ್ಲಿ ಬಸ್ ತಂಗುದಾಣಗನ್ನು ನಿರ್ಮಿಸಲು ಮನವಿ.

• ಕೋಗೀಲು ಬಳಿಯ ಶ್ರೀನಿವಾಸಪುರದಲ್ಲಿ ಯಾವುದೇ ರಸ್ತೆ, ಚರಂಡಿ ನಿರ್ಮಿಸಿಲ್ಲ. ಅದನ್ನು ಮಾಡಿಕೊಡಲು ಮನವಿ.

• ನರಸೀಪುರ ಕೆರೆ ಭಾಗದಲ್ಲಿ ಮನೆಗಳು ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ.

• ಥಣಿಸಂದ್ರ ಹಾಗೂ ಜಕ್ಕೂರು ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲು ಮನವಿ.

• ಕ್ರಾಸ್ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಸೀಮೆಂಟ್ ಹಂಪ್ಸ್ ಅಳವಡಿಸಿದ್ದು, ಅದನ್ನು ತೆರವುಗೊಳಿಸಲು ಮನವಿ.

• ಡಾಂಬರೀಕರಣ ಮಾಡಿರುವ ರಸ್ತೆ ಅಗೆದು ಹಾಳು ಮಾಡುತ್ತಿದ್ದಾರೆ, ಅದನ್ನು ತಡೆಯಲು ಮನವಿ.

• ಅಟ್ಟೂರು ಬಳಿ ಸ್ಲ್ಯಾಬ್‌ಗಳ ಹಾಳಾಗಿದ್ದು, ಅದನ್ನು ದುರಸ್ತಿಪಡಿಸಲು ಮನವಿ.

• ರಾಚೇನಹಳ್ಳಿ ಕೆರೆ ಬಳಿ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತಡೆಯಲು ಮನವಿ.

• ಫ್ಲೆಕ್ಸ್ ಬ್ಯಾನರ್‌ಗಳನ್ನು ನಿಯಂತ್ರಿಸಲು ಮನವಿ

• ನಿಯಮಬಾಹೀರವಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮನವಿ.

ಈ ವೇಳೆ ವಲಯ ಆಯುಕ್ತರಾದ ಕರೀಗೌಡ, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಉಪ ಆಯುಕ್ತರಾದ ಮಮತಾ, ಮುಖ್ಯ ಅಭಿಯಂತರರಾದ ರಂಗನಾಥ್, ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

20/04/2026 6:28 PM1 Min Read

ರಾಜ್ಯ ಸರ್ಕಾರಿ ನೌಕರರ ಸಂಬಳ ವಿಳಂಬದ ಹಿಂದೆ ಅಡಗಿದೆಯೇ ಗೃಹಲಕ್ಷ್ಮಿ ಯೋಜನೆಯ ಎಫೆಕ್ಟ್?

20/04/2026 6:24 PM2 Mins Read

BREAKING : ಕಲ್ಬುರ್ಗಿಯಲ್ಲಿ ಹಾಡ ಹಗಲೇ ಗುಂಡಿನ ಸದ್ದು : ವ್ಯಕ್ತಿ ಮೇಲೆ ಗುಂಡು ಹಾರಿಸಿ, ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

20/04/2026 5:10 PM1 Min Read
Recent News

ಪಿಎಂ ಕಿಸಾನ್ ಯೋಜನೆಯಲ್ಲಿ ಬಿಗ್ ಅಪ್‌ಡೇಟ್: ಇನ್ಮುಂದೆ ‘ರೈತ ಐಡಿ’ ಕಡ್ಡಾಯ, ಇಲ್ಲದಿದ್ದರೆ ಸಿಗಲ್ಲ ₹2,000 ಹಣ!

20/04/2026 6:31 PM

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

20/04/2026 6:28 PM

ರಾಜ್ಯ ಸರ್ಕಾರಿ ನೌಕರರ ಸಂಬಳ ವಿಳಂಬದ ಹಿಂದೆ ಅಡಗಿದೆಯೇ ಗೃಹಲಕ್ಷ್ಮಿ ಯೋಜನೆಯ ಎಫೆಕ್ಟ್?

20/04/2026 6:24 PM

ಜಪಾನ್‌ನಲ್ಲಿ ಭೀಕರ ಭೂಕಂಪ: 80 ಸೆ.ಮೀ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸಿ ಆತಂಕ; ಕರಾವಳಿ ಜನರಿಗೆ ತುರ್ತು ಸ್ಥಳಾಂತರಕ್ಕೆ ಆದೇಶ

20/04/2026 6:21 PM
State News
KARNATAKA

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

By kannadanewsnow0920/04/2026 6:28 PM KARNATAKA 1 Min Read

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣದೇವ ತಂಪು ಸುದ್ದಿ ನೀಡಿದ್ದಾನೆ. ರಾಜ್ಯದ ಹಲವೆಡೆ…

ರಾಜ್ಯ ಸರ್ಕಾರಿ ನೌಕರರ ಸಂಬಳ ವಿಳಂಬದ ಹಿಂದೆ ಅಡಗಿದೆಯೇ ಗೃಹಲಕ್ಷ್ಮಿ ಯೋಜನೆಯ ಎಫೆಕ್ಟ್?

20/04/2026 6:24 PM

BREAKING : ಕಲ್ಬುರ್ಗಿಯಲ್ಲಿ ಹಾಡ ಹಗಲೇ ಗುಂಡಿನ ಸದ್ದು : ವ್ಯಕ್ತಿ ಮೇಲೆ ಗುಂಡು ಹಾರಿಸಿ, ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

20/04/2026 5:10 PM

ಚಿನ್ನದ ಆಸೆಗೆ ಸ್ನೇಹಿತನಿಂದಲೇ ವೈದ್ಯನ ಬರ್ಬರ ಹತ್ಯೆ: ಮದುವೆ ದಿನವೇ ಹೆಣವಾದ ವರ!

20/04/2026 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.