ವರ್ಷಪೂರ್ತಿ ರಾಜ್ಯದೆಲ್ಲೆಡೆ ‘ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ’ ಕಾರ್ಯಕ್ಕೆ ಏರ್ಪಾಡು: ಸಿಎಂ ಸಿದ್ದರಾಮಯ್ಯ

ಬೆಳಗಾವಿ : 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, … Continue reading ವರ್ಷಪೂರ್ತಿ ರಾಜ್ಯದೆಲ್ಲೆಡೆ ‘ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ’ ಕಾರ್ಯಕ್ಕೆ ಏರ್ಪಾಡು: ಸಿಎಂ ಸಿದ್ದರಾಮಯ್ಯ