ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.
ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಇರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.
ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್… pic.twitter.com/6IbmyhsbX0
— DIPR Karnataka (@KarnatakaVarthe) March 5, 2026
ಮೊರ್ಗನ್ ಸ್ಟಾನ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: ಜಾಗತಿಕವಾಗಿ 2,500 ಉದ್ಯೋಗ ಕಡಿತ- ವರದಿ | Morgan Stanley Layoffs
SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ








