ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮೊದಲ ಬಾರಿಗೆ ಮಾತನಾಡಿದಂತ ಅವರು, ಏನು ಹೇಳಿದ್ರು ಅಂತ ಮುಂದೆ ಓದಿ.
ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸೋ ಮೊದಲು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸೋದಕ್ಕಾಗಿ ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ದಿದ್ದರು. ಈ ವೇಳೆ ಮೊದಲಿಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದರು.
ಏಪ್ರಿಲ್.28ರಂದು ನಮ್ಮ ವಿರುದ್ಧ ಕೇಸ್ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ.2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರವಾಗಿದೆ. ನನ್ನನ್ನು ರಾಜಕೀಯವಾಗಿ ಮುಗಿಸೋದಕ್ಕೆ ಹೀಗೆ ಮಾಡಲಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು.
BREAKING: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ: ಬಂಧನದ ಬಳಿಕ ಹೆಚ್.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ
BREAKING: ನಾಳೆ CBSE, ICSE 10, 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ