ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಹೇಳಿಕೆ ನೀಡಿದ್ದಂತ ಮಹೇಶ್ ತಿಮರೋಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಇಂದು ಸಂಜೆಯೊಳಗೆ ಬಂಧಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸರಿಗೆ ಸೂಚಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಮಹೇಶ್ ತಿಮರೋಡಿ ಹೇಳಿಕೆ ನೀಡಿದ್ದರು. ಈ ವಿಚಾರ ವಿಧಾನಸಭೆಯಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನಲೆಯಲ್ಲಿ ಮಹೇಶ್ ತಿಮರೋಡಿ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ಇದಷ್ಟೇ ಅಲ್ಲದೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವನೇ ಸಿದ್ಧರಾಮಯ್ಯ, ಅವರು ಕೊಲೆಗಾರ ಎಂಬುದಾಗಿ ವಿವಾದಾತ್ಮಕ, ಪ್ರಚೋಕನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಿರುವಂತ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಇಂದು ಸಂಜೆಯೊಳಗೆ ಬಂಧಿಸುವಂತೆಯೂ ಖಡಕ್ ಸೂಚನೆಯನ್ನು ನೀಡಿರುವುದಾಗಿ ಹೇಳಲಾಗುತ್ತಿದೆ.
1 ಲಕ್ಷ ಸಂಬಳದಲ್ಲಿ 10 ವರ್ಷಗಳಲ್ಲಿ 1 ಕೋಟಿ ಗಳಿಸುವುದು ಹೇಗೆ? ಇಲ್ಲಿದೆ ಮಾಹಿತಿ
BREAKING : ‘CM‘ ವಿರುದ್ಧ ಕೊಲೆ ಆರೋಪ : ಮಹೇಶ್ ತಿಮರೋಡಿ ವಿರುದ್ಧ `FIR’ ದಾಖಲು.!