ಕೆಎನ್ಎನ್ಡಿಜಿಟಲ್ ಡೆಸ್ಕ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಇನ್ನು ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ಮಾಜಿ ಪ್ರಧಾನಿ ವಿರುದ್ಧ ಈ ಬಂಧನ ವಾರಂಟ್ ಹೊರಡಿಸಿದ್ದಾರೆ. ಇಸ್ಲಾಮಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರಂಟ್ ಹೊರಡಿಸಲಾಗಿದೆ. ಶುಕ್ರವಾರ (ಸೆಪ್ಟೆಂಬರ್ 30) ಇಮ್ರಾನ್ ಖಾನ್ ಇಸ್ಲಾಮಾಬಾದ್ನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಜೆಬಾ ಚೌಧರಿ ಅವರಿಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದರು. ಸಾರ್ವಜನಿಕ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಮಹಿಳಾ ನ್ಯಾಯಾಧೀಶೆ ಜೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದರು.
ಆಗಸ್ಟ್ 20 ರಂದು ಇಸ್ಲಾಮಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ, ಇಮ್ರಾನ್ ಖಾನ್ ತನ್ನ ಸಹೋದ್ಯೋಗಿ ಶಹಬಾಜ್ ಗಿಲ್ ಅವ್ರನ್ನ ನಡೆಸಿಕೊಂಡಿದ್ದಕ್ಕಾಗಿ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಶಹಬಾಜ್ ಗಿಲ್ ಅವ್ರನ್ನ ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಯಿತು.