ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತೊಮ್ಮೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.ಹೌದು, ನಾಡಿದ್ದು ಕೇಂದ್ರ ಗೃಹ ಸಚಿವರು ಕರ್ನಾಟಕಕ್ಕೆ ಆಗಮಿಸಲಿದ್ದು,. ಮೂರು ದಿನ ನಡೆಯುವ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.
ಗುರುವಾರ ರಾತ್ರಿ ಬೆಂಗಳೂರಿಗೆ ಬರಲಿರುವ ಅಮಿತ್ ಷಾ, ಗುರುವಾರ, ಶುಕ್ರವಾರ, ಶನಿವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಗುರುವಾರ ರಾತ್ರಿ 10 ಗಂಟೆಗೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಷಾ, ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ, 30, ಶುಕ್ರವಾರದಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.15 ರವರೆಗೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ಅವರು ಮಂಡ್ಯಕ್ಕೆ ಭೇಟಿ ನೀಡಲಿದ್ದು, 1.45ಕ್ಕೆ ಸರ್ಕಾರಿ ಬಾಲಕರ ಕಾಲೇಜಿಗೆ ತೆರಳಲಿರುವ ಅವರು, 3.15ರವರೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5.20ಕ್ಕೆ ಯಲಹಂಕಕ್ಕೆ ತೆರಳಲಿರುವ ಸಚಿವರು ಸಂಜೆ 5.45ರಿಂದ 6.45ರವರೆಗೆ ಅರಮನೆ ಮೈದಾನದಲ್ಲಿ ಭಾಗಿಯಾಗಲಿದ್ದಾರೆ.
ಡಿ, 31, ಶನಿವಾರದಂದು ದೇವನಹಳ್ಳಿಯ ಆವತಿಯಲ್ಲಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಮಧ್ಯಾಹ್ನ 3ರಿಂದ 4.30 ರವರೆಗೆ ಬಿಜೆಪಿ ಬೂತ್ ಅಧ್ಯಕ್ಷರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಡಿ.31 ರಂದು ರಾತ್ರಿ ನವದೆಹಲಿಗೆ ವಾಪಸ್ ಆಗಲಿದ್ದಾರೆ.
BIGG NEWS : ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಸೇವಕರು, ನ್ಯಾಯಾಂಗವೂ ಯೋಚಿಸಬೇಕು ; ಕಿರಣ್ ರಿಜಿಜು