ಮಂಗಳೂರು : ಹಿಂದೂ ಮುಖಂಡ ಅರುಣ್ ಕುಮಾರ್ ಫುತ್ತಿಲ್ ಬಿಜೆಪಿ ಸೇರ್ಪಡೆಗೊ ಮುನ್ನ ಬಿಜೆಪಿ ಪಕ್ಷವು ಅರುಣ್ ಕುಮಾರ್ ಗೆ ಹಲವು ಷರತ್ತುಗಳನ್ನು ಒಡ್ಡಿದೆ ಎಂದು ಹೇಳಲಾಗುತ್ತಿದ್ದು ಈ ಕುರಿತಾಗಿ ಇಂದು ಅರುಣ್ ಕುಮಾರ್ ಪುತ್ತಿಲ್ ಸಮಾಲೋಚನಾ ಸಭೆ ಕರೆದಿದ್ದು ಸಭೆಯ ಬಳಿಕ ಬಿಜೆಪಿ ಸೇರ್ಪಡೆ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದುವರೆಯಲು ಪುತ್ತಿಲ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಮತ್ತು ಆರಸ್ಎಸ್ಎಸ್ ಜೊತೆಗಿನ ಹಲವು ಸುತ್ತಿನ ಮಾತುಕತೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ವಿಧಾನಸಭೆ ಚುನಾವಣೆಯ ನಂತರ ಅವರು ಹುಟ್ಟುಹಾಕಿರುವ ಪುತ್ತಿಲ ಪರಿವಾರದ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನದ ಬಗ್ಗೆ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಯಲಿದೆ.
ಬಿಜೆಪಿ ವಿಧಿಸಿರುವ ಷರತ್ತೇನು?
ಪುತ್ತಿಲ ಪರಿವಾರವನ್ನು ವಿಸರ್ಜಿಸಿದರೆ ಮಾತ್ರ ಬಿಜೆಪಿಗೆ ಬನ್ನಿ ಎಂದು ಕೆಲವು ಬಿಜೆಪಿ ನಾಯಕರು ಷರತ್ತು ಒಡ್ಡಿದ್ದಾರೆ ಎಂದೂ ಮೂಲಗಳು ಹೇಳಿವೆ. ಆದರೆ, ಪುತ್ತಿಲ ಪರಿವಾರವನ್ನು ಅರುಣ್ ಪುತ್ತಿಲ ವಿಸರ್ಜನೆ ಮಾಡುತ್ತಾರೆಯೇ ಎಂಬುದೇ ಸದ್ಯದ ಕುತೂಹಲವಾಗಿದೆ. ಈ ಮಧ್ಯೆ, ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಅವರ ಅಭಿಮಾನಿಗಳಲ್ಲೇ ಭಿನ್ನಾಭಿಪ್ರಾಯ ಇದೆ. ಪಕ್ಷ ಸೇರ್ಪಡೆ ಬೇಡ, ಲೋಕಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸರ್ಧಿಸಿ ಎಂಬ ಒತ್ತಡ ಹಲವರಿಂದ ವ್ಯಕ್ತವಾಗಿದೆ. ಇನ್ನು ಕೆಲವರು ಬಿಜೆಪಿ ಸೇರ್ಪಡೆಗೆ ಒಲವು ವ್ಯಕ್ತಪಡಿಸಿದ್ದಾರೆ.