ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ತಿಳಿಸಿದೆ.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತನ್ನನ್ನು ಬಂಧಿಸಿ ರಿಮಾಂಡ್ ಮಾಡಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.
ಇಂದಿನ ವಿಚಾರಣೆಯ ಸಮಯದಲ್ಲಿ, ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮೇ 7.ರಂದು ಈ ವಿಷಯವನ್ನು ಮತ್ತೆ ಆಲಿಸುವುದಾಗಿ ಅದು ಹೇಳಿದೆ.