ಬೆಂಗಳೂರು : ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಲಿದ್ದಾರೆ. ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಶಾಸಕ ಅರವಿಂದ್ ಲಿಂಬಾವಳಿ ಅವರು ಆರೋಪ ಮುಕ್ತರಾಗಲಿ ಎಂದು ಹೇಳಿದರು. ಈ ಪ್ರಕರಣದಲ್ಲಿ ಶಾಸಕರು ಭಾಗಿಯಾಗಿಲ್ಲ. ಪೊಲೀಸರು ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಬೆನ್ನಲ್ಲೆ ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದ್ದಾರೆ
ಪ್ರಕರಣದ ಕುರಿತು ಅರವಿಂದ ಲಿಂಬಾವಳಿ ಹೇಳಿದ್ದೇನು..?
ಸುದ್ದಿಗಾರರೊಂದಿಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ, ಪ್ರದೀಪ್ನ ಆತ್ಮಕ್ಕೆ ಶಾಂತಿ ಸಿಗಲಿ ಆಥ್ಮಹತ್ಯೆಗೆ ಶರಣಾದ ಪ್ರದೀಪ್ ನಮ್ಮ ಕಾರ್ಯಕರ್ತನೇ ಆಗಿದ್ದಾನೆ. ಚುನಾವಣೆಯಲ್ಲಿ ಸೋಷಿಯಲ್ ಮೀಡಿಯಾ ಗುತ್ತಿಗೆ ತೆಗೆದುಕೊಂಡಿದ್ದನು. ಈತ ವಾರ್ಡ್ ಮಟ್ಟದಲ್ಲಿಪ್ರವೀಣ್ ಉತ್ತಮ ಕೆಲಸ ಮಾಡುತ್ತಿದ್ದನು. ಜೂನ್ ಜುಲೈನಲ್ಲಿ ನಮ್ಮ ಪಕ್ಷದ ಕಚೇರಿಗೆ ಬಂದಿದ್ದನು .
ಜನತಾ ದರ್ಶನ ವೇಳೆ ನನ್ನನ್ನು ಭೇಟಿಯಾಗಿದ್ದು ನಿಜ. ನನಗೆ ಸಮಸ್ಯೆಯಾಗಿದೆ ಎಂದು ನನ್ನ ಬಳಿ ಹೇಳಿಕೊಂಡಿದ್ದನು. ಆತ ನೀಡಿದ ಸಂಖ್ಯೆಗೆ ಹಣ ನೀಡುವಂತೆ ಹೇಳಿದ್ದೆನೆ. ಕೊರೊನಾ ಹಿನ್ನೆಲೆ ಸ್ವಲ್ಪ ಸಮಯ ಕಾಯುವಂತೆ ಹೇಳಿದ್ದೆ. ಪರಸ್ಪರ ಕೂತು ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಿಕೊಳ್ಳುವಂತೆ ಹೇಳಿದ್ದೆ. ಬಳಿ ಭೂಮಿ ಪೂಜೆ ಸಂದರ್ಭದಲ್ಲೂ ಆತ ಭೇಟಿಯಾಗಿದ್ದನು. ಅನ್ಯಾಯವಾಗಿದೆ ಎಂದು ಯಾರೇ ನನ್ನ ಬಳಿ ಬಂದರು ನಾನು ಸಹಾಯ ಮಾಡುತ್ತೇನೆ. ಡೆತ್ ನೋಟ್ ಬರೆದ ಹೆಸರಿನವರ ಬಗ್ಗೆಯೂ ನನಗೆ ಪರಿಚಯವಿದೆ. ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಾಗ ಬರೆದಿಟ್ಟ ಡೆತ್ ನೋಟ್ನಲ್ಲಿ ನನ್ನ ಹೆಸರು ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆಗೆ ಸಂಪೂರ್ಣ ಸಹಾಯ ನೀಡುತ್ತೇನೆ. ಇನ್ಮುಂದೆ ಇಂತಹ ವಿಚಾರದಲ್ಲಿ ಸಹಾಯ ಮಾಡೋದಕ್ಕೆ ಹೋಗುವ ಮುನ್ನಾ ಜನಪ್ರತಿನಿಧಿಗಳೆ ಹುಷಾರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ.ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ಪೊಲೀಸರು ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ.
BIGG NEWS : ಹುಬ್ಬಳ್ಳಿಯಲ್ಲಿ ಬಸ್ ಹರಿದು ಸಮಾವೇಶಕ್ಕೆ ತೆರಳುತ್ತಿದ್ದ ‘ಕೈ’ ಕಾರ್ಯಕರ್ತ ಸಾವು