ಬೆಂಗಳೂರು: ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ( Arvind Limbavali ) ಅವರ ಮಾತುಗಳು ಇಡೀ ಬಿಜೆಪಿ ( BJP ) ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ.
ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ "ನಾನೇನು ರೇಪ್ ಮಾಡಿದ್ನಾ" ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ.
ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ.
ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? pic.twitter.com/4aHGnI4MJ0
— Karnataka Congress (@INCKarnataka) September 3, 2022
ಈ ಬಗ್ಗೆ ಸರಣಿ ಟ್ವಿಟ್ ಮಾಡಿದ್ದು, ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ ಎಂದು ಒತ್ತಾಯಿಸಿದೆ.
ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ @BSBommai ಅವರು
ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು.ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ.#ಮಹಿಳಾವಿರೋಧಿಬಿಜೆಪಿ
— Karnataka Congress (@INCKarnataka) September 3, 2022
‘ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ.. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳೀನ್ ಕುಮಾರ್ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ? ಎಂದು ಪ್ರಶ್ನಿಸಿದೆ.
'@BJP4Karnataka ಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ,
ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ..ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ?
ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ?@nalinkateel ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?— Karnataka Congress (@INCKarnataka) September 3, 2022