ನವದೆಹಲಿ: ಹಿರಿಯ ಅಧಿಕಾರಿ ಅರವಿಂದ್ ಶ್ರೀವಾಸ್ತವ ಅವರನ್ನು ಹೊಸ ಕಂದಾಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 1994ರ ಬ್ಯಾಚ್ ನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಶ್ರೀವಾಸ್ತವ ಅವರು ಪ್ರಸ್ತುತ ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶ್ರೀವಾಸ್ತವ ಅವರನ್ನು ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.
IAS officer Arvind Shrivastava, Additional Secretary, Prime Minister's Office, appointed as Secretary, Department of Revenue, Ministry of Finance
IAS officer Santosh Kumar Sarangi appointed as Secretary, Ministry of New and Renewable Energy
IAS officer Vumlunmang Vualnam,… pic.twitter.com/L4ixeT0z9B
— ANI (@ANI) April 18, 2025
ನಾಗರಿಕ ವಿಮಾನಯಾನ ಕಾರ್ಯದರ್ಶಿ ವುಮ್ಲುನ್ಮಾಂಗ್ ವುಲ್ನಾಮ್ ಅವರನ್ನು ವೆಚ್ಚ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮನೋಜ್ ಗೋವಿಲ್ ಅವರನ್ನು ಕ್ಯಾಬಿನೆಟ್ ಸೆಕ್ರೆಟರಿಯೇಟ್ನ ಕಾರ್ಯದರ್ಶಿ (ಸಮನ್ವಯ) ಆಗಿ ನೇಮಿಸಲಾಗಿದೆ.
ಮಧ್ಯಪ್ರದೇಶ ಕೇಡರ್ನ 1994ರ ಬ್ಯಾಚ್ನ ಐಎಎಸ್ ಅಧಿಕಾರಿ ವಿವೇಕ್ ಅಗರ್ವಾಲ್ ಅವರನ್ನು ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಅಗರ್ವಾಲ್ ಪ್ರಸ್ತುತ ಕಂದಾಯ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದಾರೆ. ಅವರು ಫೈನಾನ್ಷಿಯಲ್ ಇಂಟೆಲಿಜೆನ್ಸ್ ಯುನಿಟ್-ಇಂಡಿಯಾ (ಎಫ್ಐಯು-ಐಎನ್ಡಿ) ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಅಧಿಕಾರಶಾಹಿ ಪುನರ್ರಚನೆಯ ಭಾಗವಾಗಿ ಇತರ ಹಿರಿಯ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಪ್ರಮುಖ ಇಲಾಖೆಗಳಿಗೆ ನೇಮಿಸಲಾಗಿದೆ.
ಸಣ್ಣ ನೀರಾವರಿ ಇಲಾಖೆಯ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು
ಪೋಷಕರೇ ಗಮನಿಸಿ : ಕೇಂದ್ರೀಯ ವಿದ್ಯಾಲಯ 2ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ