ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
“ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಯನ್ನು ದೆಹಲಿ ಕಾಂಗ್ರೆಸ್ ಘಟಕ ವಿರೋಧಿಸಿತ್ತು. ಅದರ ಹೊರತಾಗಿಯೂ, ದೆಹಲಿಯಲ್ಲಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿತು ” ಎಂದು ಅರವಿಂದರ್ ಸಿಂಗ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.