ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಒಂದೇ ದಿನ ರಾಜ್ಯಾಧ್ಯಂತ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಅವರಲ್ಲಿ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 100 ಆಗಿದೆ ಅಂತ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 391 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 118 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಇಬ್ಬರು, ಕೋಲಾರದಲ್ಲಿ 14, ತುಮಕೂರು 08, ದಾವಣಗೆರೆ 10, ಶಿವಮೊಗ್ಗ 07, ಬಾಗಲಕೋಟೆ 04, ಧಾರವಾಡ 15, ಹಾವೇರಿ 15, ಉತ್ತರ ಕನ್ನಡ 03, ಕಲಬುರ್ಗಿ 08, ಯಾದಗಿರಿ 04, ಬೀದರ್ 06, ಬಳ್ಳಾರಿ 03, ವಿಜಯನಗರ 10, ಕೊಪ್ಪಳ 03 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಚಾಮರಾಜನಗರ 03, ಮಂಡ್ಯ 30, ಉಡುಪಿ 06, ಚಿಕ್ಕಮಗಳೂರು 05, ಕೊಡಗು 12 ಸೇರಿದಂತೆ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಇದುವರೆಗೆ 58,534 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 7,840 ಮಂದಿಗೆ ಪಾಸಿಟಿವ್ ಅಂತ ತಿಳಿದು ಬಂದಿತ್ತು. ಈಗ ಸಕ್ರೀಯ ಡೆಂಗ್ಯೂ ಕೇಸ್ ಸಂಖ್ಯೆ 358 ಆಗಿದೆ ಅಂತ ತಿಳಿಸಿದೆ.
ಸ್ವ ಉದ್ಯೋಗಾಕಾಂಕ್ಷಿ ಮಹಿಳೆಯರ ಗಮನಕ್ಕೆ: ಉಚಿತ ಫ್ಯಾಶನ್ ಡಿಸೈನಿಂಗ್, ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!