ಬೆಳಗಾವಿ : ತಮ್ಮ ಮಗ ಮೃಣಾಲ್ಗೆ ಟಿಕೆಟ್ ದೊರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರ ಬಳಿ ಆತನ ಪರ ಕೆಲಸ ಮಾಡುವಂತೆ ಸಚಿವೆ ಸೂಚಿಸಿದ್ದಾರೆ.ಈ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
BREAKING : ಛತ್ತೀಸ್‌ಗಢದಲ್ಲಿ ‘ಭದ್ರತಾಪಡೆ-ಮಾವೋವಾದಿಗಳ’ ನಡುವೆ ಗುಂಡಿನ ಚಕಮಕಿ : ಇಬ್ಬರು ನಕ್ಸಲರ ಹತ
ಪುತ್ರ ಮೃಣಾಲ್ಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ. ಮಗ ಮೃಣಾಲ್ ಪರ ಕೆಲಸ ಮಾಡುವಂತೆ ಮತ್ತು ಮತ ಹಾಕಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ನಾವು ‘ಜೆಡಿಎಸ್ ಪಕ್ಷ’ದವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್
ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸುತ್ತಿದ್ದ ಕಚೇರಿಯ ಮೇಲೆ ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಠಾತ್ ದಾಳಿ ನಡೆಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ, ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಸಭೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಭೆಯಲ್ಲಿದ್ದವರ ಎಲ್ಲರ ಮಾಹಿತಿ ಪಡೆದು ನಂತರ ಅವರನ್ನು ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ.