ಹುಬ್ಬಳ್ಳಿ: ಸಾಗರ ತಾಲ್ಲೂಕಿನ ಬಾರಂಗಿಯ ನಾಗವಳ್ಳಿ ಗ್ರಾಮದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿತ್ತು. ಈ ಹಿನ್ನಲೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ, ರೈತರಿಗೆ ಅನುಕೂಲ ಕಲ್ಪಿಸುವಂತೆ ಅಶೋಕ್ ಬೇಳೂರು ಅವರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯನ್ನು ಭೇಟಿ ಮಾಡಿದಂತ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ನಾಗವಳ್ಳಿ ಗ್ರಾಮದ ಜನರ ಸಮಸ್ಯೆ ಸರಿ ಪಡಿಸುವಂತೆ ನಿಮ್ಮನ್ನು ಭೇಟಿಯಾಗಿದ್ದೇನೆ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಬೇಸಿಗೆಯಲ್ಲಿ ರೈತರ ಫಸಲು ಒಣಗುವಂತಾಗಿದೆ ಎಂಬುದಾಗಿ ಮನವರಿಕೆ ಮಾಡಿಕೊಟ್ಟರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾರಂಗಿ ಹೋಬಳಿಯ ನಾಗವಳ್ಳಿ ಗ್ರಾಮದಲ್ಲಿ ಹೆಚ್ಚು ವಾಸಿಸುತ್ತಿರೋರು ಈ ನಾಡಿಗೆ ಬೆಳಕು ನೀಡಲು ತಮ್ಮ ಮನೆ ಮಠ ಕಳೆದುಕೊಂಡ ಶರಾವತಿ ಸಂತ್ರಸ್ತ ಜನರಾಗಿದ್ದಾರೆ. ಅವರಿಗೆ ಸರಿಯಾಗಿ ವಿದ್ಯುತ್ ನೀಡದೇ ಇದ್ದರೇ ಹೇಗೆ? ಎಂದು ಪ್ರಶ್ನಿಸಿದರು.
ರೈತರ ಬೆಳೆಗೆ, ಕುಡಿಯೋ ನೀರಿಗಾಗಿ ಸಮರ್ಪಕ ರೀತಿಯಲ್ಲಿ ವಿದ್ಯುತ್ ಪೂರೈಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ಹುಬ್ಬಳ್ಳಿಯ ಹೆಸ್ಕಾಂ ಅಧಿಕಾರಿಗಳಿಗೆ ಮನವಿಯನ್ನು ಮಾಡಿದರು.
ಈ ಸಂದರ್ಭದಲ್ಲಿ ನಾಗವಳ್ಳಿ ಗ್ರಾಮ ಮುಖಂಡರಾದಂತ ವಾಸು, ಚಂದ್ರಶೇಖರ್, ವೀರಪ್ಪ, ವೆಂಕಟೇಶ್, ಮಂಜುನಾಥ್, ದೇವೇಂದ್ರ ಹಾಗೂ ಲಿಂಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ವಸಂತ ಬಿ ಈಶ್ವರಗೆರೆ
‘ಲೆಹರ್ ಸಿಂಗ್’ ಆರೋದ ಬಗ್ಗೆ ಈ ತಿರುಗೇಟು ಕೊಟ್ಟ ‘ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು’
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund
ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!