ಮಂಗಳೂರು:ಬಿಜೆಪಿಯಿಂದ ರಾಜ್ಯವ್ಯಾಪಿ ‘ಫ್ರೀ ಸಾಕಪ್ಪ ಅಭಿವೃದ್ಧಿ ಮಾಡಪ್ಪ’ ಎಂಬ ಅಭಿಯಾನ ನಡೆಯಲಿದೆ ಎಂದು ಅಶೋಕ್ ಹೇಳಿದರು.
ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.’ರಾಜ್ಯದಲ್ಲಿ ಏಳು ತಿಂಗಳಿಂದ ಅಭಿವೃದ್ಧಿ ಆಗಿಲ್ಲ.550 ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಸಿಗುತ್ತಿಲ್ಲ’ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.
‘ಗ್ಯಾರಂಟಿ ಯೋಜನೆಯಿಂದ ಆರ್ಥಿಕ ವ್ಯವಸ್ಥೆ ಕುಂಠಿತವಾಗಿದೆ.ಇದನ್ನು ಜನರಿಗೆ ಮನದಟ್ಟು ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಸಂಶಯ ಇಲ್ಲ’ ಎಂದರು.