Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್
KARNATAKA

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್

By kannadanewsnow0919/09/2025 5:49 PM

ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು.

100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ

“ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. “ಬಗರ್ ಹುಕುಂ ಸೇರಿದಂತೆ, ಭೂ ಸುಧಾರಣಾ ಕಾಯ್ದೆಯಡಿ ಮಂಜೂರಾತಿಗೆ ಬಾಕಿ ಇರುವ ಭೂಮಿಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ದೇವರು ಅವಕಾಶ ಮಾತ್ರ ಕೊಡುತ್ತಾನೆ. ಸಿಕ್ಕಂತಹ ಅವಕಾಶವನ್ನು ಬಳಸಿಕೊಂಡು ಬಡ ಜನರ ಏಳಿಗೆ ಮಾಡದಿದ್ದರೆ ಅಧಿಕಾರವಿದ್ದು ಏನು ಲಾಭ? ಕನಕಪುರದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಮಹಿಳೆಯರ ಹೆಸರಿಗೆ ಈ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ನಾನು ಸುಮಾರು 8 ಸಾವಿರ ಮಂದಿಗೆ ಬಗರ್ ಹುಕುಂ ಜಮೀನು ನೀಡಿದ್ದೇನೆ. ಈಗ ಡಿ.ಕೆ.ಸುರೇಶ್ ಅವರಿಗೆ ಈ ಸಮಿತಿಯ ಜವಾಬ್ದಾರಿ ನೀಡಲಾಗಿದೆ.” ಎಂದರು.

“ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು, ಬಡವರಿಗೆ ನಿವೇಶನ ಹಂಚಲು ಆಗಲಿಲ್ಲ. ಹೀಗಿದ್ದ ಮೇಲೆ ರಾಜಕಾರಣ ಏಕೆ ಮಾಡಬೇಕು? ರಾಜಕೀಯ ಮಾಡುವ ಅವಕಾಶವನ್ನೇ ಜನತಾದಳದವರು ಕಳೆದುಕೊಂಡಿದ್ದಾರೆ” ಎಂದರು.

“ಮಾಜಿ ಸಚಿವ ಅಶ್ವಥ ನಾರಾಯಣ ಅವರು ಜಿಲ್ಲೆಗೆ ಬಂದಿದ್ದರು. ವೀರಾಧಿವೀರ ಗಂಡು. ಯಾರಾದರೂ ಗಂಡಸರು ಇದ್ದೀರಾ? ಎಂದು ಪ್ರಶ್ನಿಸಿದ್ದರು. ಅವರಿಗೂ ಸಹ ಒಂದೇ ಒಂದು ನಿವೇಶನ ಹಂಚಲು ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಒಬ್ಬರಿಗೂ ಸಹಾಯ ಮಾಡಲು ಆಗಲಿಲ್ಲ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಜಿಬಿಎ ತೆಗೆದು ಹಾಕುವುದಾಗಿ ಯಾರೋ ಬಿಜೆಪಿ ನಾಯಕರು ಇತ್ತೀಚೆಗೆ ಹೇಳಿದ್ದಾರಂತೆ. ಮಿಸ್ಟರ್ ಅಶೋಕ್, ಅಶ್ವಥ ನಾರಾಯಣ, ಜನತಾ ದಳದ ನಾಯಕರೇ ನಿಮ್ಮ ಯಾರ ಹಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಬರೆದಿಲ್ಲ. ಅಶೋಕಣ್ಣಾ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಲು 2028 ಕ್ಕೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಈ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ನೀವು ಇನ್ನು ಅಧಿಕಾರ ಮರೆತುಬಿಡಿ” ಎಂದರು ವ್ಯಂಗ್ಯವಾಡಿದರು.

ಬಸವಣ್ಣನವರ ಕಾಲದಲ್ಲಿ ವಚಮ ಚಳುವಳಿಯ ನೇತೃತ್ವ ವಹಿಸಿದ್ದ ಹಿಂದುಳಿದ ವರ್ಗಕ್ಕೆ ಸೇರಿದ ಅಲ್ಲಮ ಪ್ರಭು ಅವರು ʼಕೊಟ್ಟ ಕುದುರೆಯನ್ನು ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನನ್ನೂ ಮಾಡದವರು ಇನ್ನೆಂದೂ ಕೆಲಸ ಮಾಡಲೂ ಸಾಧ್ಯವಿಲ್ಲ” ಎಂದು ಕುಟುಕಿದರು.

“ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಸರ್ಕಾರ ನೀಡಿದ ಯೋಜನೆಗಳನ್ನು ಹಾಗೂ ಜನರಿಗೆ ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ ದಾಖಲೆಯಿದ್ದರೆ ನೀಡಬೇಕು. ಫಲಾನುಭವಿಗಳು ಯಾರಾದರೂ ಇದ್ದರೆ, ಕೈ ಎತ್ತಿ ತಿಳಿಸಿ” ಎಂದರು.

ಜಾತಿ ಹೆಸರು ಸರಿಯಾಗಿ ನಮೂದಿಸಿ

“ಈ ದೇಶದ ಬಡವರು, ಹಿಂದುಳಿದ ವರ್ಗದವರ ಪರವಾಗಿ ಕೆಲಸ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಓಬಿಸಿಗಳ ಏಳಿಗೆಗಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ನಿಮ್ಮ ಜಾತಿಯನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಬರೆಸಬೇಕು. ನೀವು ಸರಿಯಾಗಿ ನಿಮ್ಮ ಜಾತಿ ನಮೂದಿಸದಿದ್ದರೆ ಇಡೀ ಸಮಾಜಕ್ಕೆ ಅನ್ಯಾಯ ಎಸಗಿದಂತೆ, ಆತ್ಮಸಾಕ್ಷಿಗೆ ಮೋಸ ಮಾಡಿದಂತೆ” ಎಂದರು.

“ನಮ್ಮನ್ನು ಟೀಕೆ ಮಾಡಿದ ವಿರೋಧ ಪಕ್ಷಗಳು ಈಗ ನಮ್ಮನ್ನೇ ಅನುಕರಣೆ ಮಾಡುತ್ತಿವೆ. ಹರಿಯಾಣ, ಮಹಾರಾಷ್ಟ್ರ, ಗೋವಾ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಬದುಕಿನ ಮೇಲೆ ನಾವು ರಾಜಕಾರಣ ಮಾಡುವ ನಾವು ಕಳೆದ ಎರಡು ವರ್ಷದಲ್ಲಿ ಸುಮಾರು 1 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಖಾತೆಗೆ ಹಾಕಿದ್ದೇವೆ. ಮಹಿಳೆಯರು ಸಂಸಾರವನ್ನು ತೂಗಿಸುತ್ತಾರೆ ಎಂದು ಅವರಿಗೆ ಹೆಚ್ಚು ಪ್ರಯೋಜನ ನೀಡಲಾಗಿದೆ. ಅವರು ಮಕ್ಕಳ ಭವಿಷ್ಯಕ್ಕೆ ಗ್ಯಾರಂಟಿ ಯೋಜನೆಗಳ ಹಣ ಬಳಕೆ ಮಾಡುತ್ತಾರೆ ಎಂಬುದು ನಮ್ಮ ಆಲೋಚನೆ” ಎಂದರು.

“ಆಧಾರ್ ಕಾರ್ಡ್, ಪಿಂಚಣಿ, ಉಳುವವನೆ ಭೂಮಿಯ ಒಡೆಯ ಸೇರಿದಂತೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಒಂದೇ ಒಂದು ಯೋಜನೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಆಗಿಲ್ಲ. ನಮ್ಮ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಮರು ಜನ್ಮವೆತ್ತಿ ಬಂದರೂ ದಳ ಹಾಗೂ ಬಿಜೆಪಿಯವರು ನಿಲ್ಲಿಸಲು, ಬದಲಾವಣೆ ಮಾಡಲು ಆಗುವುದಿಲ್ಲ. ಈ ಮಾತನ್ನು ದೇವರಾಜ ಅರಸು ಅವರ ಭಾವಚಿತ್ರದ ಮುಂದೆ ಹೇಳುತ್ತಿದ್ದೇನೆ” ಎಂದರು.

“ಜನರ ಬದುಕು ಬದಲಾವಣೆ ಮಾಡುವಂತಹ ಕಾರ್ಯಕ್ರಮಗಳನ್ನು ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ್ದರು. ಬಡವರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದವರು ದೇವರಾಜ ಅರಸು ಅವರು. ಸಾಮಾಜಿಕ ನ್ಯಾಯ ನೀಡಿದವರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ತಂದರು. ವೃದ್ದಾಪ್ಯ ವೇತನ ನೀಡುವುದನ್ನು ರಾಜ್ಯದಲ್ಲಿ ಜಾರಿಗೆ ತಂದರು. ವಿಧವಾ ಪಿಂಚಣಿ, ಬಡವರಿಗೆ ನಿವೇಶನಗಳನ್ನು ನೀಡಲಾಯಿತು. ಹೀಗೆ ಇಲ್ಲದವರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಯಿತು. ಬಗರ್ ಹುಕುಂ ಸಾಗುವಳಿ ಭೂಮಿ ನೀಡುವ ಕೆಲಸವೂ ಆಯಿತು. ರಾಮನಗರದಲ್ಲಿ ಶಾಸಕರಾಗಿದ್ದ ಸಿ.ಎಂ. ಲಿಂಗಪ್ಪ ಅವರು ನೂರಾರು ಜನರಿಗೆ ಭೂಮಿ ಹಂಚಿಕೆ ಮಾಡಿದರು. ಈ ಜಿಲ್ಲೆಯವರಾದ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ನಿರ್ಮಿಸಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ” ಎಂದರು.

“ದೇವರಾಜ ಅರಸು ಅವರು ರಾಜಮನೆತನಕ್ಕೆ ಸೇರಿದವರು. ಆದರೆ ಬಡವರ ಪರವಾಗಿ ಕೆಲಸ ಮಾಡಿದರು. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮುದಾಯ ಎನ್ನದೇ ಸಕಲ ಹಿಂದುಳಿದ ಸಮುದಾಯಗಳ ಪರವಾಗಿ ನಿಂತು ಕೆಲಸ ಮಾಡಿದವರು ಅರಸು ಅವರು” ಎಂದರು.

“ವಿದ್ಯಾರ್ಥಿ ನಾಯಕನಾಗಿದ್ದಾಗ ಬಂಗಾರಪ್ಪ ಅವರ ಗರಡಿಯಲ್ಲಿ ಬೆಳೆದ ವ್ಯಕ್ತಿ ನಾನು. ಕಲ್ಲಿನ ಕ್ವಾರಿ ಕೆಲಸ ನೋಡಲು ಜಿಲ್ಲೆಗೆ ಬಂದಿದ್ದೆ. ಆಗ ನನಗೆ ದೂರವಾಣಿ ಕರೆ ಬಂತು. ತಕ್ಷಣ ಬೆಂಗಳೂರಿಗೆ ಹೊರಡಲು ಹೇಳಲಾಯಿತು. ಆಗ ನನಗೆ ತಿಳಿಯಿತು ಅವರ ಸಂಪುಟದಲ್ಲಿ ಸಚಿವಸ್ಥಾನ ನೀಡಿದ್ದಾರೆ ಎಂದು. ಒಬ್ಬ ಹಿಂದುಳಿದ ವರ್ಗದ ನಾಯಕ ಬಂಗಾರಪ್ಪ ಅವರು ಈ ಶಿವಕುಮಾರ್ ನನ್ನು ಬೆಳೆಸಿದರು. ಅವರ ಋಣ ತೀರಿಸಬೇಕು ಎಂದು ಅವರ ಮಗ ಮಧು ಬಂಗಾರಪ್ಪ ಅವರನ್ನು ದಳದಿಂದ ಕರೆತಂದು ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವ ಸ್ಥಾನ ನೀಡಲಾಗಿದೆ” ಎಂದರು.

ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM2 Mins Read

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM1 Min Read

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM2 Mins Read
Recent News

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

16/04/2026 9:39 PM

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

BREAKING: ಇಸ್ರೇಲ್-ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರಂಪ್

16/04/2026 9:22 PM

ಕಾರಿನ ಇಂಡಿಕೇಟರ್ ಹಾಕಿದಾಗ ‘ಟಿಕ್-ಟಿಕ್’ ಸದ್ದು ಬರುವುದೇಕೆ? ಇದರ ಹಿಂದಿರುವ ಅಸಲಿ ರಹಸ್ಯ ಇಲ್ಲಿದೆ!

16/04/2026 9:09 PM
State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ‘KPS ಶಾಲೆ’ಗೆ 2026-27ನೇ ಸಾಲಿನ ಪ್ರೌಢಶಾಲಾ ದಾಖಲಾತಿ ಆರಂಭ

By kannadanewsnow0916/04/2026 9:39 PM KARNATAKA 2 Mins Read

ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಾಲೆಗಳಿಗಿಂತಲೂ ಮಿಗಿಲಾದ ಅತ್ಯಾಧುನಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಿವಮೊಗ್ಗ ಜಿಲ್ಲೆಯ…

BREAKING: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ಮುಂದುವರಿಸಿ ಸರ್ಕಾರದ ಅಧಿಕೃತ ಆದೇಶ

16/04/2026 9:28 PM

‘ಸಾಗರ ನಗರಸಭೆ’ ವಿರುದ್ಧ ಸಿಡಿದೆದ್ದ ‘ವರದ ಕಾಲೋನಿ’ ಜನರು: ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

16/04/2026 8:12 PM

Rain In Karnataka: ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಮುಂದಿನ 3 ಗಂಟೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

16/04/2026 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.