ಬೆಂಗಳೂರು : ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕರು ಬಹಳ ಉತ್ಸಾಹ ತೋರಿದ್ದಾರೆ. ಆದರೆ ಬಿಜೆಪಿ ಮಾತ್ರ ಇದಕ್ಕೆ ಭಾರಿ ವಿರೋಧ ವ್ಯಕ್ತಪಡಿಸಿದೆ.
ಕರ್ನಾಟಕದಲ್ಲಂತೂ ಕಾಂಗ್ರೆಸ್ ನವರಿಗೆ ಟಿಪ್ಪು ಪ್ರತಿಮೆ ಸ್ಥಾಪನೆ ಮಾಡಲು ಬಿಡುವುದಿಲ್ಲ, ಅವರು ಬೇರೆ ಎಲ್ಲಾದರೂ ಹೋಗಿ ನಿರ್ಮಿಸಲಿ ಎಂದು ಸಚಿವ ಅಶ್ವತ್ ನಾರಾಯಣ್ ವ್ಯಂಗ್ಯವಾಡಿದ್ದಾರೆ, ಇನ್ನೂ ಪ್ರಮೋದ್ ಮುತಾಲಿಕ್ ಕೂಡ ಇದಕ್ಕೆ ವಿರೋಧ ವ್ಯ್ತಪಡಿಸಿದ್ದು, ಟಿಪ್ಪು ಪ್ರತಿಮೆ ಸ್ಥಾಪಿಸಿದರೆ ಅದನ್ನು ಕಿತ್ತೆಸೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ, ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಬೆನ್ನಲ್ಲೇ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸಲು ಕಾಂಗ್ರೆಸ್ ಮುಂದಾಗಿದ್ದು, ಈ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.