ಬೆಂಗಳೂರು : ವೋಟರ್ ಐಡಿ ಅಕ್ರಮದ ಹಿಂದೆ ಸಚಿವ ಅಶ್ವಥ್ ನಾರಾಯಣ್ ಕೈವಾಡವಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವರು ಕಾಂಗ್ರೆಸ್ ನಾಯಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಸಂಬಂಧ ಇಲ್ಲ , ವೋಟರ್ ಐಡಿ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ. ಕಾಂಗ್ರೆಸ್ ಸುಖಾ ಸುಮ್ಮನೆ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲೇ ತುಂಬಿ ಹೋಗಿದ್ದಾರೆ. ಈ ರೀತಿ ಆರೋಪ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ. ಹೊಂಬಾಳೆ ಸಂಸ್ಥೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ , ಇವರಂತು ಒಳ್ಳೆ ಕೆಲಸ ಮಾಡುವುದಿಲ್ಲ, ಮಾಡುವವರಿಗೂ ಬಿಡುವುದಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
BREAKING NEWS: ನಾಳೆಯಿಂದ ಕೋಲಾರದ ಮುಳಬಾಗಿಲಿನಿಂದ JDS ‘ಪಂಚರತ್ನ ರಥಯಾತ್ರೆ’ ಆರಂಭ – HDK