ದುಬೈ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2022ರ ಸೂಪರ್ ಫೋರ್ ಹಂತದ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಗಾಯಗೊಂಡ ಶಹನವಾಜ್ ದಹಾನಿ ಬದಲಿಗೆ ಹಸನ್ ಅಲಿ ಪಾಕಿಸ್ತಾನಕ್ಕೆ ಮರಳಿದ್ದಾರೆ. ಭಾರತದ ಪರ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಮತ್ತು ರವಿ ಬಿಷ್ಣೋಯ್ ಆಡುವ ಹನ್ನೊಂದರ ಬಳಗದಲ್ಲಿದ್ದಾರೆ.
ಪಾಕಿಸ್ತಾನ (ಪ್ಲೇಯಿಂಗ್ ಇಲೆವೆನ್): ಮೊಹಮ್ಮದ್ ರಿಜ್ವಾನ್ (ಡಬ್ಲ್ಯೂ), ಬಾಬರ್ ಅಜಮ್ (ಸಿ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕಾರ್ ಅಹ್ಮದ್, ಶದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್ ಮತ್ತು ನಸೀಮ್ ಶಾ.
ಭಾರತ (ಪ್ಲೇಯಿಂಗ್ ಇಲೆವೆನ್): ಕೆಎಲ್ ರಾಹುಲ್, ರೋಹಿತ್ ಶರ್ಮಾ (ಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ಡಬ್ಲ್ಯೂ), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯಜುವೇಂದ್ರ ಚಹಲ್ ಮತ್ತು ಅರ್ಷ್ದೀಪ್ ಸಿಂಗ್.